Connect with us

ಕಾರ್ಯಕ್ರಮಗಳು

ನಾಳೆ (ಅ 2)ಶಾಂತಿನಗರ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿಯಾವರ ಪ್ರತಿಮೆ ಅನಾವರಣ :ನೇತ್ರ ತಪಾಸಣಾ ಶಿಬಿರ : ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ.ಹರೇಕಲ ಹಾಜಬ್ಬರಿಗೆ ಅಭಿನಂದನೆ

Published

on

ಪುತ್ತೂರು: ಕರ್ನಾಟಕ ಸರಕಾರ ಶಾಲಾ ಫ್ರೌಢ ಶಿಕ್ಷಣ ಇಲಾಖೆ, ಸರಕಾರಿ ಪ್ರೌಢ ಶಾಲೆ ಶಾಂತಿನಗರ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಅ.2ರಂದು ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ನಡೆಯಲಿದೆ. ಕಾರ್ಯಕ್ರಮ ಬೆಳಿಗ್ಗೆ 8 ಗಂಟೆಗೆ ಕವಿತಾ ದಿನಕರ ಬಳಗ ಪುತ್ತೂರು ಅವರ ದೇಶಭಕ್ತಿ ಗೀತೆ ಗಾಯನದೊಂದಿಗೆ ಪ್ರಾರಂಭಗೊಳ್ಳಲಿದೆ. ಬಳಿಕ ಶಾಸಕ ಅಶೋಕ್ ಕುಮಾರ್ ರೈ ಗಾಂಧಿ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ‌‌‌‌. ಹರೇಕಳ ಹಾಜಬ್ಬ ಅವರಿಗೆ ವಿಶೇಷ ಅಭಿನಂದನೆ ನಡೆಯಲಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ ಕಾರ್ಯಕ್ರಮ ಉದ್ಘಾಟಿಸಲಿದ್ದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಸುರೇಶ್, ಕೋಡಿಂಬಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ‌ ಯು, ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸೃಜನ್ ಊರುಬೈಲು, ರೈ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಶಾಂತಿನಗರ, ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಸದಸ್ಯ ಡಾ.ರಾಜರಾಮ್ ಕೆ.ಬಿ, ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಸದಸ್ಯ ಜಾನ್ ಕೆನ್ಯೂಟ್, ಪ್ರಗತಿಪರ ಕೃಷಿಕ ಮೋನಪ್ಪ ಗೌಡ ಪಮ್ಮನಮಜಲು, ನಿವೃತ್ತ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಹಾಗೂ ಶಾಂತಿನಗರ ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಧನಲಕ್ಷ್ಮೀ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಜೆಎಸ್ ಡಬ್ಲ್ಯೂ ಫೌಂಡೇಶನ್ ಹಾಗೂ ಮಾನವ ಬಂಧುತ್ವ ವೇದಿಕೆ ಪುತ್ತೂರು ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣೆ ನಡೆಯಲಿದೆ ಎಂದು ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷ ಪ್ರಕಾಶ್ ಗೌಡ ನೆಕ್ಕಿಲಾಡಿ ಮತ್ತು ಶಾಲಾ ವಿದ್ಯಾರ್ಥಿ ನಾಯಕ ರೋಶನ್ ಡಿಸೋಜಾ ತಿಳಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement