Published
13 hours agoon
By
Akkare News
ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಒಂದು ತಿಂಗಳ ಕಾಲ ನಡೆದ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮದ ಸಮಾರೋಪ ಸಮಾರಂಭವು ನಿರೂಪಕಿ ರೇಣುಕಾ ಕಾಣಿಯೂರ್ ಅವರ ಐಸಿರಿ ಮನೆಯಲ್ಲಿ ಅಕ್ಟೋಬರ್ 1 ಗುರುವಾರ ಜರಗಿತು.
“ಗುರುತತ್ತ್ವದ ಸತ್ವವನ್ನು ನೆನಪಿಸುವ ಕಾಲ ಕೂಡಿ ಬಂದಿದೆ” ಎಂದು ಯುವ ವಾಹಿನಿ(ರಿ.)ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ನಿರೂಪಕ ದಿನೇಶ್ ಸುವರ್ಣ ರಾಯಿ ಹೇಳಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವು ಜಾತಿ, ಧರ್ಮ, ಭಾಷೆಯ ಎಲ್ಲ ಗಡಿಗಳನ್ನು ಮೀರಿ ಮಾನವೀಯತೆಯನ್ನು ಪ್ರತಿಪಾದಿಸುತ್ತದೆ. ಗುರುತತ್ತ್ವವನ್ನು ಅರಿತು ಬದುಕಿನಲ್ಲಿ ಅಳವಡಿಸಿಕೊಂಡು, ಪರಸ್ಪರ ಗೌರವ, ಸಹಬಾಳ್ವೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಸಂಕಷ್ಟದಲ್ಲಿರುವವರಿಗೆ ನೆರವಾಗುವುದು ಹಾಗೂ ಸಮಾಜದ ಒಳಿತಿಗಾಗಿ ಸೇವೆ ಸಲ್ಲಿಸುವುದೇ ಮಾನವೀಯತೆಯ ನಿಜವಾದ ಪೂಜೆ ಎಂದು ಅವರು ಹೇಳಿದರು.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಶ್ರೀ ಕ್ಷೇತ್ರ ಕಣಿಯೂರು ಮಹಾಬಲೇಶ್ವರ ಸ್ವಾಮೀಜಿ ಸಮಾಜಕ್ಕೆ ಗುರುಗಳ ತತ್ವಸಂದೇಶಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಯುವವಾಹಿನಿ ಮಾಣಿ ಘಟಕ ಕೈಗೊಂಡಿರುವುದು ಶ್ಲಾಘನೀಯ ಎಂದರು. ಇಂತಹ ಪ್ರಯತ್ನಗಳು ಸಮಾಜದಲ್ಲಿ ಜಾಗೃತಿ ಮೂಡಿಸಿ, ಉತ್ತಮ ಮೌಲ್ಯಗಳೊಂದಿಗೆ ಬದುಕಲು ಪ್ರೇರಣೆ ನೀಡುತ್ತವೆ.ಎಂದರು.


ಕಾರ್ಯಕ್ರಮದಲ್ಲಿಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ರಮೇಶ್ ಪೂಜಾರಿ ಮುಜಾಲ,ಜಯಪ್ರಕಾಶ್ ಜಯಂತ ಬರಿಮಾರು, ನಾಗೇಶ್ ಕೊಂಕಣಪದವು, ರಾಜೇಶ್ ಸುವರ್ಣ ಬಂಟ್ವಾಳ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೇಶ್ ಬಿ. ಮೆಸ್ಕಂ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸೋಮಸುಂದರ ‘ ಲೋಕೇಶ್ ಪಲ್ಲತ್ತಿಲ್ಲ ಬಂಟ್ವಾಳ ಘಟಕದ ಸಮಾಜಸೇವೆ ನಿರ್ದೇಶಕರಾದ ಚಿನ್ನಾ ಕಲ್ಲಡ್ಕ, ಘಟಕದ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ ಸ್ವಾಗತಿಸಿದರು. ಶ್ರೀಧರ್ ಪೂಜಾರಿ ಮುಜಲ ವಂದಿಸಿದರು. ದೀಪಕ್ ಪೆರಾಜೆ ಹಾಗೂ ಭವಿಷ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ವಿಶ್ವನಾಥ ಪೂಜಾರಿ , ಖಜಾಂಜಿ ತ್ರಿವೇಣಿ ರಮೇಶ್ ಸಹಕರಿಸಿದರು. 


