ಪುತ್ತೂರು: ಕೆದಿಲ ಪಾಟ್ರಕೋಡಿ, ಮಿತ್ತೂರು ಗಡಿಯಾರ , ಲೈನ್‌ಮ್ಯಾನ್ ರವಿ ಅವರು ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ (ಕರೆಂಟ್ ಶಾಕ್ ಹೊಡೆದು) ನಿಧನ ಹೊಂದಿದ್ದಾರೆ. ಕರೆ ಬಂದ ತಕ್ಷಣ ಸ್ಥಳಕ್ಕೆ ಬಂದು ಕೆಲಸ ಮಾಡಿಕೊಡುತ್ತಿದ್ದ ಜನಪ್ರಿಯ ವ್ಯಕ್ತಿಯಾಗಿದ್ದ ಅವರು, ಗ್ರಾಮಸ್ಥರಿಗೆ ಅಚ್ಚುಮೆಚ್ಚಿನವರಾಗಿದ್ದರು. ಅವರ ಅಕಾಲಿಕ ನಿಧನ ಗ್ರಾಮದಲ್ಲಿ ತೀವ್ರ ಶೋಕ ಮೂಡಿಸಿದೆ.
ರವಿ ಅವರ ನಿಧನ ಗ್ರಾಮಕ್ಕೆ ತುಂಬಲಾರದ ನಷ್ಟವಾಗಿದ್ದು, ಮೃತರ ಕುಟುಂಬಕ್ಕೆ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.