Published
8 hours agoon
By
Akkare News
ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಿಲಾಡಿ ಗಂಗಾಧರ ಕೆ. (55) ಅವರು ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗಾಗಲೇ ಗಂಗಾಧರ್ ಅವರಿಗೆ ಕಿಡ್ನಿ ಕಸಿ (Renal Transplant) ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇದುವರೆಗೆ ಸುಮಾರು ₹7 ಲಕ್ಷ ವೆಚ್ಚವಾಗಿದೆ. ವೈದ್ಯರ ಸಲಹೆಯಂತೆ ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಬೇಕಾಗಿದೆ.


ಪತ್ನಿ ಹಾಗೂ ಮಗನೊಂದಿಗೆ ಜೀವನ ನಡೆಸುತ್ತಿರುವ ಗಂಗಾಧರ್ ಅವರ ಕುಟುಂಬವು ಆರ್ಥಿಕ ಸಂಕಷ್ಟದಲ್ಲಿದ್ದು, ಈಗಾಗಲೇ ಸಾಲ ಮಾಡಿ ಚಿಕಿತ್ಸೆಗೆ ಹಣ ವ್ಯಯಿಸಿರುವುದಾಗಿ ಮನವಿಯಲ್ಲಿ ತಿಳಿಸಲಾಗಿದೆ. ಮುಂದಿನ ಚಿಕಿತ್ಸೆಯ ವೆಚ್ಚವನ್ನು ಭರಿಸುವುದು ಕುಟುಂಬಕ್ಕೆ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ಸಹೃದಯ ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ.



