Connect with us

ಇತರ

ನೊಂದವರ ಪಾಲಿಗೆ ಅಕ್ಕರೆಯ ಆಸರೆ ಎರಡು ಕಿಡ್ನಿ ವೈಫಲ್ಯ ನೆರವಿನ ನಿರೀಕ್ಷೆಯಲ್ಲಿ ಪುತ್ತೂರು ತಾಲೂಕು ಸರ್ವೆ ಗ್ರಾಮದ ರಂಜಲಾಡಿ ಗಂಗಾಧರ

Published

on

ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಿಲಾಡಿ ಗಂಗಾಧರ ಕೆ. (55) ಅವರು ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಗಂಗಾಧರ್ ಅವರಿಗೆ ಕಿಡ್ನಿ ಕಸಿ (Renal Transplant) ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇದುವರೆಗೆ ಸುಮಾರು ₹7 ಲಕ್ಷ ವೆಚ್ಚವಾಗಿದೆ. ವೈದ್ಯರ ಸಲಹೆಯಂತೆ ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಬೇಕಾಗಿದೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕವೂ ನಿಯಮಿತ ಚಿಕಿತ್ಸೆಗೆ ಪ್ರತಿ ತಿಂಗಳು ಸುಮಾರು ₹25,000ರಿಂದ ₹30,000ದವರೆಗೆ ವೆಚ್ಚವಾಗುವ ಸಾಧ್ಯತೆ ಇದೆ ಎಂದು ಕುಟುಂಬದ ಮನವಿಯಲ್ಲಿ ತಿಳಿಸಲಾಗಿದೆ. ಮುಂದಿನ ಚಿಕಿತ್ಸೆಗೆ ಸುಮಾರು ₹15 ಲಕ್ಷದಷ್ಟು ಹಣದ ಅಗತ್ಯವಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪತ್ನಿ ಹಾಗೂ ಮಗನೊಂದಿಗೆ ಜೀವನ ನಡೆಸುತ್ತಿರುವ ಗಂಗಾಧರ್ ಅವರ ಕುಟುಂಬವು ಆರ್ಥಿಕ ಸಂಕಷ್ಟದಲ್ಲಿದ್ದು, ಈಗಾಗಲೇ ಸಾಲ ಮಾಡಿ ಚಿಕಿತ್ಸೆಗೆ ಹಣ ವ್ಯಯಿಸಿರುವುದಾಗಿ ಮನವಿಯಲ್ಲಿ ತಿಳಿಸಲಾಗಿದೆ. ಮುಂದಿನ ಚಿಕಿತ್ಸೆಯ ವೆಚ್ಚವನ್ನು ಭರಿಸುವುದು ಕುಟುಂಬಕ್ಕೆ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ಸಹೃದಯ ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ.

ಗಂಗಾಧರ್ ಅವರ ಚಿಕಿತ್ಸೆಗೆ ನಿಮ್ಮ ಕೈಲಾದಷ್ಟು ನೆರವು ನೀಡಿ

ಸಣ್ಣ ಸಹಾಯವೂ ಈ ಕುಟುಂಬಕ್ಕೆ ದೊಡ್ಡ ಆಸರೆಯಾಗಬಹುದು. ಗಂಗಾಧರ್ ಅವರು ಸಂಪೂರ್ಣವಾಗಿ ಚೇತರಿಸಿಕೊಂಡು ಮತ್ತೆ ಸಹಜ ಜೀವನಕ್ಕೆ ಮರಳಲು ಸಾರ್ವಜನಿಕರು ಹಾಗೂ ದಾನಿಗಳು ನೆರವಿನ ಹಸ್ತ ಚಾಚುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version