Published
8 hours agoon
By
Akkare News
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಪಂಜ–ನಿಂತಿಕಲ್ಲು ರಸ್ತೆಯ ಮುಚ್ಚಿಲ ಬಳಿ ಅಪಘಾತಕ್ಕೀಡಾಗಿದೆ.
ನಿಂತಿಕಲ್ಲು ಕಡೆಯಿಂದ ಬರುತ್ತಿದ್ದ ವೇಳೆ, ಮುಂದೆ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾರೆ. ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಶಾಸಕಿ ಭಾಗೀರಥಿ ಮುರುಳ್ಯ ಅವರ ಇನ್ನೋವಾ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದ್ದು, ಸ್ವಿಫ್ಟ್ ಕಾರಿನ ಹಿಂಭಾಗಕ್ಕೂ ಹಾನಿಯಾಗಿದೆ. ಅಪಘಾತದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಎರಡೂ ವಾಹನಗಳಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.