Connect with us

ನಿಧನ

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ

Published

on

ಪಣಜಿ: ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಿಗ್ಗೆ ತೀವ್ರ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿದ್ದಾಗ ಇಂದು ಬೆಳಿಗ್ಗೆ ಸುಮಾರು 5:20ರ ಸುಮಾರಿಗೆ ನಾನಾ ಪಾಟೇಕರ್ ತೀವ್ರ ಹೃದಯ ಸ್ತಂಭನ ಉಂಟಾಗಿದೆ. ತಕ್ಷಣವೇ ಅವರನ್ನು ರಕ್ಷಿಸಲು ವೈದ್ಯರು ಸತತ 45 ನಿಮಿಷಗಳ ಕಾಲ ನಿರಂತರವಾಗಿ ಸಿಪಿಆರ್ (CPR) ಪ್ರಕ್ರಿಯೆ ನಡೆಸಿದರಾದರೂ, ಯಾವುದೇ ಸ್ಪಂದನೆ ಸಿಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಾಲ್ಕರ್ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆ ವತಿಯಿಂದ ವೈದ್ಯಕೀಯ-ಕಾನೂನು ಪ್ರಕರಣ (MLC – Medico-Legal Case) ದಾಖಲಿಸಲಾಗಿದ್ದು, ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ತಮ್ಮ ಖಡಕ್ ಡೈಲಾಗ್ ಡೆಲಿವರಿ ಹಾಗೂ ಅದ್ಭುತ ಅಭಿನಯದ ಮೂಲಕ ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ನಾನಾ ಪಾಟೇಕರ್ ಅವರ ಹಠಾತ್ ನಿಧನಕ್ಕೆ ಇಡೀ ಚಿತ್ರರಂಗ, ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ

 

Continue Reading
Click to comment

Leave a Reply

Your email address will not be published. Required fields are marked *

Advertisement