Published
16 hours agoon
By
Akkare News
ಕರ್ನಾಟಕದ ಸಚಿವರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿವಾದ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾವು ಮುಖ್ಯಮಂತ್ರಿಯಾದ ಬಳಿಕ ತಮ್ಮನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಸಚಿವರಿಗೆ ಸ್ಟಿಂಗ್ ಆಪರೇಷನ್ ಬಗ್ಗೆ ಎಚ್ಚರಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಈ ಬಗ್ಗೆ ತಮ್ಮ ಬಳಿ ಸಾಕಷ್ಟು ಮಾಹಿತಿ ಮತ್ತು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದ್ದಾರೆ.