Published
10 hours agoon
By
Akkare News
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರುವ ಆನೆ ಯಾವುದು ಎಂಬ ಕುತೂಹಲಕ್ಕೆ ತೆರೆ ಬೀಳುವ ಸಮಯ ಹತ್ತಿರವಾಗಿದೆ. ಅಂಬಾರಿ ಹೊರುವ ಆನೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಧನಂಜಯನ ಹೆಸರು ಮುಂಚೂಣಿಗೆ ಬಂದಿದ್ದು, ಆತನ ಆಯ್ಕೆ ಬಹುತೇಕ ಖಚಿತವಾಗಿದೆ ಎಂದು ನಿರೀಕ್ಷಿಸಲಾಗಿದೆ
ಅಭಿಮನ್ಯು ನಿವೃತ್ತಿಯ ಬಳಿಕ ಚಿನ್ನದ ಅಂಬಾರಿಯನ್ನು ಹೊರುವ ಜವಾಬ್ದಾರಿ ಯಾರ ಹೆಗಲೇರಲಿದೆ ಎಂಬ ಚರ್ಚೆ ನಡೆಯುತ್ತಿತ್ತು. ಈ ನಡುವೆ, ತಾಲೀಮಿನಲ್ಲಿ ಮಹೇಂದ್ರನಿಗೆ ಹಿನ್ನಡೆಯಾಗಿರುವುದು ಧನಂಜಯನ ಆಯ್ಕೆಯ ಸಾಧ್ಯತೆಯನ್ನು ಹೆಚ್ಚಿಸಿದೆ. ಇದರೊಂದಿಗೆ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಆಗಿಯೂ ಧನಂಜಯ ಕಾಣಿಸಿಕೊಳ್ಳುವ ನಿರೀಕ್ಷೆ ಮೂಡಿದೆ. ಇನ್ನು ಧನಂಜಯ ದೈತ್ಯಗಾತ್ರದ ಆನೆಯಾಗಿದ್ದು, ಇತ್ತೀಚಿನ ತೂಕ ಪರೀಕ್ಷೆಯಲ್ಲಿ ಬರೋಬ್ಬರಿ 5,530 ಕೆ.ಜಿ. ತೂಕ ಹೊಂದಿದ್ದಾನೆ. ಅಂದರೆ, ಸುಮಾರು 5.5 ಟನ್ ತೂಕದ ಗಜರಾಜನಾಗಿದ್ದಾನೆ. 






