Connect with us

ಇತ್ತೀಚಿನ ಸುದ್ದಿಗಳು

ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲು ಧನಂಜಯನ ಆಯ್ಕೆ ಬಹುತೇಕ ಖಚಿತ

Published

on

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರುವ ಆನೆ ಯಾವುದು ಎಂಬ ಕುತೂಹಲಕ್ಕೆ ತೆರೆ ಬೀಳುವ ಸಮಯ ಹತ್ತಿರವಾಗಿದೆ. ಅಂಬಾರಿ ಹೊರುವ ಆನೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಧನಂಜಯನ ಹೆಸರು ಮುಂಚೂಣಿಗೆ ಬಂದಿದ್ದು, ಆತನ ಆಯ್ಕೆ ಬಹುತೇಕ ಖಚಿತವಾಗಿದೆ ಎಂದು ನಿರೀಕ್ಷಿಸಲಾಗಿದೆ ಅಭಿಮನ್ಯು ನಿವೃತ್ತಿಯ ಬಳಿಕ ಚಿನ್ನದ ಅಂಬಾರಿಯನ್ನು ಹೊರುವ ಜವಾಬ್ದಾರಿ ಯಾರ ಹೆಗಲೇರಲಿದೆ ಎಂಬ ಚರ್ಚೆ ನಡೆಯುತ್ತಿತ್ತು. ಈ ನಡುವೆ, ತಾಲೀಮಿನಲ್ಲಿ ಮಹೇಂದ್ರನಿಗೆ ಹಿನ್ನಡೆಯಾಗಿರುವುದು ಧನಂಜಯನ ಆಯ್ಕೆಯ ಸಾಧ್ಯತೆಯನ್ನು ಹೆಚ್ಚಿಸಿದೆ. ಇದರೊಂದಿಗೆ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಆಗಿಯೂ ಧನಂಜಯ ಕಾಣಿಸಿಕೊಳ್ಳುವ ನಿರೀಕ್ಷೆ ಮೂಡಿದೆ. ಇನ್ನು ಧನಂಜಯ ದೈತ್ಯಗಾತ್ರದ ಆನೆಯಾಗಿದ್ದು, ಇತ್ತೀಚಿನ ತೂಕ ಪರೀಕ್ಷೆಯಲ್ಲಿ ಬರೋಬ್ಬರಿ 5,530 ಕೆ.ಜಿ. ತೂಕ ಹೊಂದಿದ್ದಾನೆ. ಅಂದರೆ, ಸುಮಾರು 5.5 ಟನ್ ತೂಕದ ಗಜರಾಜನಾಗಿದ್ದಾನೆ.

ಚಿನ್ನದ ಅಂಬಾರಿ ಹೊರುವ ಆನೆಯನ್ನು ಆಯ್ಕೆ ಮಾಡುವಾಗ ಆನೆಯ ದೈಹಿಕ ಸಾಮರ್ಥ್ಯ, ತಾಲೀಮಿನ ಪ್ರಗತಿ, ನಡಿಗೆ ಹಾಗೂ ಭಾರ ಹೊರುವ ಸಾಮರ್ಥ್ಯವನ್ನು ಪ್ರಮುಖವಾಗಿ ಪರಿಗಣಿಸಲಾಗುತ್ತದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಧನಂಜಯನ ಹೆಸರು ಮುಂಚೂಣಿಗೆ ಬಂದಿದೆ.

ಒಟ್ಟಿನಲ್ಲಿ, ಈ ಬಾರಿಯ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಧನಂಜಯ ಹೊತ್ತು ಸಾಗಲಿದ್ದಾನೆಯೇ ಎಂಬ ಕುತೂಹಲ ಹೆಚ್ಚಾಗಿದೆ. ಅಧಿಕೃತ ಆಯ್ಕೆಯ ಘೋಷಣೆಯ ಬಳಿಕವಷ್ಟೇ ಈ ವಿಚಾರಕ್ಕೆ ಸ್ಪಷ್ಟ ಉತ್ತರ ಸಿಗಲಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version