Published
9 hours agoon
By
Akkare News
ಮಂಗಳೂರು : ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಯಾರಾದರೂ ಅಡ್ಡಿಪಡಿಸಲು ಯತ್ನಿಸಿದರೆ, ಸಂತ್ರಸ್ತರು ದೂರು ನೀಡಿದ್ದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಸ್ವಂತ ನೈತಿಕ ನಂಬಿಕೆಗಳ ಆಧಾರದ ಮೇಲೆ ಕಾನೂನುಬದ್ಧ ಚಟುವಟಿಕೆಗಳನ್ನು ತಡೆಯಲು ಯತ್ನಿಸುವವರು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಹಾಗೂ ಕೃತ್ಯದ ಗಂಭೀರತೆಯನ್ನು ಆಧರಿಸಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ” ಎಂದಿದ್ದಾರೆ 






