ಕಾಣಿಯೂರು : ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅಕ್ಟೋಬರ್ 11ರಿಂದ 20ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಶ್ರೀ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನಂ ಉಡುಪಿ, ಶ್ರೀ ಕಾಣಿಯೂರು ರಾಮತೀರ್ಥ ಮಠದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಆದೇಶದಂತೆ ಉತ್ಸವ ಆಯೋಜಿಸಲಾಗಿದೆ. ಪ್ರತಿದಿನ ರಾತ್ರಿ 8 ಗಂಟೆಗೆ ಮಹಾಪೂಜೆ ನಡೆಯಲಿದೆಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ.11ರಿಂದ ಅ 20ರವರೆಗೆ ನಡೆಯಲಿದೆ. ನವರಾತ್ರಿ ಉತ್ಸವ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಪ್ರತಿದಿನ ರಾತ್ರಿ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ, ಕುಣಿತ ಭಜನಾ ತಂಡಗಳಿಂದ ಕುಣಿತ ಭಜನಾಸೇವೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ.