Published
2 hours agoon
By
Akkare News
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ (Karnataka Governor) ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಬದಲಾವಣೆಯಲ್ಲಿ ನಾಲ್ವರಿಗೆ ಹೊಸದಾಗಿ ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದ್ದು, ಇಬ್ಬರು ಹಾಲಿ ರಾಜ್ಯಪಾಲರನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಲಾಗಿದೆ.

ಇನ್ನು ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮಿಳುನಾಡಿನ ಜವಾಬ್ದಾರಿ ನೀಡಲಾಗಿದೆ.







