ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಿಡಿಲು, ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಒಣ ಹವಾಮಾನ ಕಂಡುಬಂದರೂ, ಅಕ್ಟೋಬರ್ 15 ರಿಂದ ಅಂದರೆ ನಾಳೆಯಿಂದ ಆರಂಭಗೊಂಡು ಅಕ್ಟೋಬರ್ 20 ಮತ್ತು 21ರವರೆಗೆ ರಾಜ್ಯದ ಹಲವೆಡೆ ಮಳೆಯ ( Rain) ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ.
ನಾಳಿನ (ಅಕ್ಟೋಬರ್ 15) ಹವಾಮಾನ ಮುನ್ಸೂಚನೆ: ಅಕ್ಟೋಬರ್ 15ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಿಡಿಲು-ಮಿಂಚು ಸಹಿತ ಮಳೆ ಆರಂಭವಾಗಲಿದೆ. ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಿಡಿಲು-ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಇ ಗುಡುಗು ಸಹಿತ ಮಳೆಯಾಗಬಹುದು. ಮುಂದಿನ ದಿನಗಳ (ಅಕ್ಟೋಬರ್ 16 – 21) ಹವಾಮಾನ ವಿವರ: ಅಕ್ಟೋಬರ್ 16 (ಶುಕ್ರವಾರ): ‘ಅತ್ಯಂತ ಭಾರಿ ಮಳೆ’ ಎಚ್ಚರಿಕೆ ದಕ್ಷಿಣ ಒಳನಾಡು: ಮೈಸೂರು, ಚಾಮರಾಜನಗರ, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಅತ್ಯಂತ ಭಾರಿ ಮಳೆ’ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು: ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಬೆಳಗಾವಿ, ಧಾರವಾಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಆರಂಭವಾಗಲಿದೆ. ಅಕ್ಟೋಬರ್ 17 ಮತ್ತು 18 (ಶನಿವಾರ – ರವಿವಾರ): ರಾಜ್ಯಾದ್ಯಂತ ವ್ಯಾಪಕ ಮಳೆ ಕರಾವಳಿ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗುಡುಗು ಸಿಡಿಲಿನ ಆರ್ಭಟ ಮುಂದುವರಿಯಲಿದೆ. ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು: ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಬಳ್ಳಾರಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 19 ಮತ್ತು 20: ದಕ್ಷಿಣ ಒಳನಾಡಿನ ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ಬಳ್ಳಾರಿ ಭಾಗಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕ್ರಮೇಣ ಮಳೆಯ ತೀವ್ರತೆ ತಗ್ಗುವ ಲಕ್ಷಣಗಳಿವೆ.
ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳ ಚಿಕಿತ್ಸೆಗೆ ಸಹಾಯ ಮಾಡುವ ಉದ್ದೇಶದಿಂದ ಈ ಅಭಿಯಾನ ಆಯೋಜಿಸಲಾಗಿದ್ದು, ನಾಗರಿಕರು ದೊಡ್ಡ ಮನಸ್ಸಿನಿಂದ ಚಿಕ್ಕ ಸಹಾಯ ಮಾಡುವಂತೆ ತಂಡ ಮನವಿ ಮಾಡಿದೆ. ಸಹಾಯ ಮಾಡಲು ಬಯಸುವವರು ಪೋಸ್ಟರ್ನಲ್ಲಿರುವ QR ಕೋಡ್ ಸ್ಕ್ಯಾನ್ ಮಾಡಿ ಅಥವಾ UPI ID: dhanyosmi@indianbk ಗೆ ಹಣ ವರ್ಗಾಯಿಸಬಹುದು.