Published
22 hours agoon
By
Akkare News
ಪುತ್ತೂರು: ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 


ಮೃತ ಮಮತಾ ಅವರು ಪುತ್ತೂರು ಕೆಎಸ್ಆರ್ಟಿಸಿಯಲ್ಲಿ ಟ್ರಾಫಿಕ್ ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸೀತಾರಾಮ ಅವರ ಪತ್ನಿಯಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.






