ಮಂಗಳೂರು ಜಿಲ್ಲಾ ಕುಸ್ತಿ ಸಂಘದ ಸಮಿತಿ ಪುನರ್ ರಚನೆ ಅಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಉಪಾಧ್ಯಕ್ಷರಾಗಿ ರಾಮದಾಸ್ ಶೆಟ್ಟಿ ವಿಟ್ಲ .ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್
ಬೆಂಗಳೂರು: ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ.
ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ರವರ ಮಾರ್ಗದರ್ಶನದಲ್ಲಿ ಮಂಗಳೂರು ಕುಸ್ತಿ ಸಂಘ( ರಿ.) 2026–2030ನೇ ಸಾಲಿನ ಜಿಲ್ಲಾ ಆಡಳಿತ ಮಂಡಳಿಯ ಸಮಿತಿಯನ್ನು ಪುನರ್ ರಚಿಸಲಾಗಿದೆ.
ಅಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಉಪಾಧ್ಯಕ್ಷರಾಗಿ ರಾಮದಾಸ್ ಶೆಟ್ಟಿ ವಿಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ, ಖಜಾಂಚಿಯಾಗಿ ವಿಕಾಸ್ ಶೆಟ್ಟಿ, ಜಂಟಿ ಕಾರ್ಯದರ್ಶಿಗಳಾಗಿ ಸಮರ್ಥ್ ಭಂಡಾರಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ದೀಪ್ತಿ ಶೆಟ್ಟಿ, ಗೋಕುಲ್ ದಾಸ್ ಭಂಡಾರಿ ಮತ್ತು ಇತರರು ಆಯ್ಕೆಯಾಗಿದ್ದಾರೆ. ವರ್ಷಂಪ್ರತಿ ಮಂಗಳೂರಿನಲ್ಲಿ ನಡೆಯುವ ತಪಸ್ಯ ಬೀಚ್ ಫೆಸ್ಟಿವಲ್‌ನಲ್ಲಿ ರಾಜ್ಯ ಮಟ್ಟದ ಬೀಚ್ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಿ ಯಶಸ್ವಿಗೊಳಿಸುವಲ್ಲಿ ಮಂಗಳೂರು ಕುಸ್ತಿ ಸಂಘದ ಪದಾಧಿಕಾರಿಗಳು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂದರ್ಭದಲ್ಲಿ ಮಂಗಳೂರು ಕುಸ್ತಿ ಸಂಘ( ರಿ.) ಇದರ ಅಧ್ಯಕ್ಷರಾಗಿ ಆಯ್ಕೆಯಾದ ಸುಜಿತ್ ರೈ ಮಾತನಾಡಿ ನಮ್ಮ ಜಿಲ್ಲಯ ಕುಸ್ತಿ ಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಅವರನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಳೆಸುವ ಆಶಯ ವ್ಯಕ್ತ ಪಡಿಸಿದರು.