Published
51 minutes agoon
By
Akkare News

ಗುರುವಾರ ಮುಂಜಾನೆ ಸುಮಾರು 1 ಗಂಟೆಗೆ ಕರ್ಬಸಂಕದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಆಲ್ವಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಈಗಾಗಲೇ ದಿನಾಂಕ 03/10/2026 ರಿಂದ 21/10/2026 ರವರೆಗೆ ದಸರಾ ರಜೆ ನೀಡಲಾಗಿತ್ತು. ಇದೀಗ ವಿಸ್ತರಿಸಲಾದ ಒಂದು ದಿನದ ರಜೆಯಿಂದ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸರಿದೂಗಿಸಲು, ಮುಖ್ಯ ಶಿಕ್ಷಕರ ವಿವೇಚನಾ ಅಧಿಕಾರದಲ್ಲಿರುವ 4 ಸ್ಥಳೀಯ ರಜೆಗಳಲ್ಲಿ 1 ರಜೆಯನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ. ಈ ಆದೇಶವನ್ನು ತಾಲೂಕಿನ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ತಕ್ಷಣವೇ ತಲುಪಿಸುವಂತೆ ಸೂಚಿಸಲಾಗಿದೆ.






