Published
45 minutes agoon
By
Akkare News

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, “ಇದು ರಾಜಕೀಯ ಸೇಡು ತೀರಿಸಿಕೊಳ್ಳಲು ಕೆಲವರು ಎಸಗಿರುವ ಹೀನ ಕೃತ್ಯವಾಗಿದೆ. ಇಂತಹ ಕೃತ್ಯಗಳು ನಡೆಯಬಾರದು ಎಂದು ನಾನು ನಿರಂತರವಾಗಿ ಹೇಳುತ್ತಾ ಬಂದಿದ್ದೇನೆ. ಈ ಸ್ಟಿಂಗ್ ಆಪರೇಷನ್ನಲ್ಲಿ ಕಾಂಗ್ರೆಸ್ ಪಕ್ಷದವರು ಯಾರೇ ಭಾಗಿಯಾಗಿದ್ದರೂ, ವಿಡಿಯೋ ಸಾಕ್ಷ್ಯಾಧಾರಗಳು ಹೊರಬರುತ್ತಿದ್ದಂತೆ ಅವರ ವಿರುದ್ಧ ಸೂಕ್ತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದರು.
ಈಗಾಗಲೇ ಕೃಪಾ ಆಳ್ವಾ ಅವರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಲಾಗಿದ್ದು, ನೋಟಿಸ್ಗೆ ನೀಡುವ ಉತ್ತರವನ್ನು ಆಧರಿಸಿ ಮುಂದಿನ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ವಿಡಿಯೋದಲ್ಲಿ ಯಾರಿದ್ದಾರೆ ಮತ್ತು ಅವರ ಹಿಂದೆ ಯಾರಿದ್ದಾರೆ ಎಂಬುದನ್ನು ಸಮಗ್ರ ತನಿಖೆ ನಡೆಸಲು ಸಿಐಡಿ (CID) ಹಾಗೂ ಸಿಬಿಐ (CBI) ನಂತಹ ಸಂಸ್ಥೆಗಳಿವೆ. ಆ ರೀತಿ ತನಿಖೆಗೆ ಹೋದರೆ ಹಳೆಯ ಪ್ರಕರಣಗಳಿಂದಲೂ ತನಿಖೆ ನಡೆಸಬೇಕಾಗುತ್ತದೆ ಎಂದು ಹೇಳುವ ಮೂಲಕ ಬಿ.ಕೆ. ಹರಿಪ್ರಸಾದ್ ಬಿಜೆಪಿಯ ವಿರುದ್ಧವೂ ವಾಗ್ದಾಳಿ ನಡೆಸಿದರು.





