Connect with us

ಸ್ಥಳೀಯ

ನ.22 ರೈ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಅಶೋಕ ಜನ-ಮನ 2026 ಒಂದು ಲಕ್ಷಕ್ಕೂ ಮಿಕ್ಕಿ ಜನರಿಗೆ ವಸ್ರ ವಿತರಣೆ ಸಹ ಭೋಜನ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Published

on

ಪುತ್ತೂರು : ಅಶೋಕ್ ನೇತೃತ್ವದ ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತೀ ವರ್ಷದಂತೆ ಆಯೋಜಿಸಲಾಗುವ ಬೃಹತ್ ವಸ್ತ್ರ ವಿತರಣಾ ಕಾರ್ಯಕ್ರಮ “ಅಶೋಕ ಜನಮನ” ಈ ಬಾರಿ ನವೆಂಬರ್ 22 ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಪುತ್ತೂರಿನ ಅಶ್ವಿನಿ ಹೋಟೇಲಿನ ಸಭಾಂಗಣದಲ್ಲಿ ​ಶನಿವಾರ ಅಶೋಕ ಜನಮನ ಕಾರ್ಯಕ್ರಮ ಸಂಬಂಧ ಕರೆದ ಪತ್ರಿಕಾಗೋಷ್ಟಿಯಲ್ಲಿ ಅವರು ಈ ವಿಷಯದ ಬಗ್ಗೆ ವಿವರಗಳನ್ನು ಮಾಧ್ಯಮ ಪ್ರತಿನಿಧಿಗಳ ಜೊತೆ ಹಂಚಿಕೊಂಡರು..

ದಿನಾಂಕ ಬದಲಾವಣೆ:

​ಹವಾಮಾನ ವೈಪರೀತ್ಯ ಹಾಗೂ ಮಳೆಯ ಮುನ್ಸೂಚನೆ ಇದ್ದುದರಿಂದ, ಈ ಮೊದಲು ನವೆಂಬರ್ 8 ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ನವೆಂಬರ್ 22 ಕ್ಕೆ ಮುಂದೂಡಲಾಗಿದೆ. ಈ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅದ್ದೂರಿಯಾಗಿ ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಶಾಸಕರು ಹೇಳಿದರು.​

ಕಾರ್ಯಕ್ರಮದ ಪ್ರಮುಖ ಮುಖ್ಯಾಂಶಗಳು.

​₹4 ಕೋಟಿ ವೆಚ್ಚದಲ್ಲಿ 1 ಲಕ್ಷ ಜನರಿಗೆ ಕೊಡುಗೆ.

ಈ ಬಾರಿ ಸುಮಾರು 1 ಲಕ್ಷಕ್ಕೂ ಅಧಿಕ ಜನರಿಗೆ ಒಟ್ಟು 4 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ದೀಪಾವಳಿ ವಸ್ತ್ರಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ವಿತರಿಸುವ ಬೃಹತ್ ಗುರಿ ಹೊಂದಲಾಗಿದೆ.

​ಉಡುಗೊರೆ ಆಯ್ಕೆಯ ಅವಕಾಶ:

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ದೀಪಾವಳಿ ಉಡುಗೊರೆ ನೀಡಲಾಗುವುದು. ಈ ಬಾರಿ ಸಾರ್ವಜನಿಕರ ಆಯ್ಕೆಗೆ ಮೂರು ಬಗೆಯ ಉಡುಗೊರೆಗಳನ್ನು ನೀಡಲಾಗುತ್ತಿದ್ದು; ತಟ್ಟೆ, ಸೀರೆ ಮತ್ತು ಬೆಡ್‌ಶೀಟ್‌ಗಳಲ್ಲಿ ಯಾವುದಾದರೂ ಒಂದನ್ನು ಪಡೆದುಕೊಳ್ಳಬಹುದು.​

ಪಕ್ಷಾತೀತ ಕಾರ್ಯಕ್ರಮ:

ಇದು ಯಾವುದೇ ಕಾಂಗ್ರೆಸ್ ಪಕ್ಷದ ಸಮಾವೇಶವಲ್ಲ, ಬದಲಿಗೆ ಇದು ದೀಪಾವಳಿ ಹಬ್ಬದ ಅಂಗವಾಗಿ ನಡೆಯುವ ವಸ್ತ್ರ ವಿತರಣಾ ಕಾರ್ಯಕ್ರಮ. ಇದಕ್ಕೆ ಎಲ್ಲಾ ಪಕ್ಷದವರ ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಿದ್ದು, ಎಲ್ಲರೂ ಭಾಗವಹಿಸಬಹುದು” ಎಂದು ಶಾಸಕರು ಮನವಿ ಮಾಡಿದರು.​

ಮನೆ ಮನೆಗೆ ಆಹ್ವಾನ:

ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರತಿ ಮನೆಗೂ ಟ್ರಸ್ಟ್‌ನ ಸದಸ್ಯರು ಖುದ್ದಾಗಿ ತೆರಳಿ ಆಮಂತ್ರಣ ನೀಡಲಿದ್ದಾರೆ.​ಉಚಿತ ಆಹಾರ ವ್ಯವಸ್ಥೆ (1 ಲಕ್ಷ ದೋಸೆ & ಊಟ): ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಬೆಳಿಗ್ಗೆಯಿಂದ ಸಂಜೆಯವರೆಗೆ ನಿರಂತರವಾಗಿ ಬಿಸಿಬಿಸಿ ದೋಸೆಗಳನ್ನು ವಿತರಿಸಲಾಗುವುದು (1 ಲಕ್ಷಕ್ಕೂ ಹೆಚ್ಚು ದೋಸೆಗಳ ಗುರಿ). ಅಲ್ಲದೆ, ಮಧ್ಯಾಹ್ನ 12:30 ರಿಂದ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.​

ವಿಶೇಷ ಆಕರ್ಷಣೆಗಳು:

ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರಮುಖ ರಾಜಕೀಯ ಹಾಗೂ ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ. ಇದರೊಂದಿಗೆ ಗೂಡುದೀಪ ಸ್ಪರ್ಧೆ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ಕ್ರೀಡಾಂಗಣದಲ್ಲಿ ನೆರವೇರಲಿದ ಎಂದು ಸ್ಪಷ್ಟಪಡಿಸಿದರು. ​

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version