Connect with us

ಇತರ

ಪ್ರದೀಪ್ ಪೂಜಾರಿ ಹಲ್ಲೆ ಪ್ರಕರಣ: ತನಿಖೆಯ ಬಗ್ಗೆ ಸಾರ್ವಜನಿಕರ ಅಸಮಾಧಾನ – ಪ್ರಕರಣವನ್ನು ರಾಜ್ಯದ ಉನ್ನತ ಮಟ್ಟ ತನಿಖಾ ಸಂಸ್ಥೆಯಾದ ಸಿಓಡಿಗೆ ವರ್ಗಾಯಿಸಲು ಬಿಲ್ಲವ ಯುವ ವೇದಿಕೆ ಆಗ್ರಹ..

Published

on

ಉಡುಪಿ: ಪ್ರದೀಪ್ ಪೂಜಾರಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕ್ಲೀನ್‌ಚಿಟ್ ನೀಡಿದಂತೆ ಮಾಧ್ಯಮಗಳಿಗೆ ಮಾಹಿತಿ ವಿಡಿಯೋ ಬಿಡುಗಡೆ ಮಾಡಲಾಗಿದೆಯೇ ಎಂಬ ವಿಚಾರ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಪೊಲೀಸ್ ಇಲಾಖೆಯ ತನಿಖಾ ಕ್ರಮದ ಬಗ್ಗೆ ಜನರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ ಎಂದು ತಿಳಿದುಬಂದಿದೆ.

ಪ್ರಕರಣದ ತನಿಖೆಯ ಕುರಿತು ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿದ್ದು,ಪೊಲೀಸ್ ಇಲಾಖೆಯ ಮೇಲಿನ ಜನರ ನಂಬಿಕೆ ಕುಗ್ಗುವ ವಾತಾವರಣ ನಿರ್ಮಾಣವಾಗಿದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಒಂದು ವೇಳೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೆ ಪ್ರಕರಣವನ್ನು ಮುಕ್ತಾಯಗೊಳಿಸಿದರೆ, ಸಂತ್ರಸ್ತರಿಗೆ ನ್ಯಾಯ ದೊರಕಿಸುವವರು ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆಗಾಗಿ ಪ್ರಕರಣವನ್ನು ಸಿಓಡಿ ತನಿಖಾ ಸಂಸ್ಥೆಗೆ ಅಥವಾ ಉನ್ನತ ಮಟ್ಟದ ತನಿಖೆಗೆ ವರ್ಗಾಯಿಸಬೇಕು ಎಂದು ಬಿಲ್ಲವ ಯುವ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷರಾದ ನ್ಯಾಯವಾದಿ ಪ್ರವೀಣ್ ಪೂಜಾರಿ ಅವರು ಆಗ್ರಹಿಸಿದ್ದಾರೆ.

ಈ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬಂದು ಸಂತ್ರಸ್ತರಿಗೆ ನ್ಯಾಯ ದೊರಕಬೇಕು. ಯಾವುದೇ ಪ್ರಭಾವ, ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂಬುದು ನಮ್ಮ ಪ್ರಮುಖ ಒತ್ತಾಯವಾಗಿದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯ ನ್ಯಾಯಪರ ಹೋರಾಟಗಾರರು ಸಾಮಾಜಿಕ ಸಂಘಟನೆಗಳ ಸಹಭಾಗಿತ್ವದೊಂದಿಗೆ ಇದೇ ವಿಚಾರವಾಗಿ ದಿನಾಂಕ 4/11/2026ನೇ ಬುಧವಾರ ಬೃಹತ್ ಪ್ರತಿಭಟನೆ ಜನಾಗ್ರಹ ನಡೆಸುವ ಕುರಿತು ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸಂತ್ರಸ್ತರಿಗೆ ನ್ಯಾಯ ದೊರಕುವವರೆಗೆ ಕಾನೂನುಬದ್ಧ ಹೋರಾಟ ಮುಂದುವರಿಯಲಿದೆ..

 

Continue Reading
Click to comment

Leave a Reply

Your email address will not be published. Required fields are marked *

Advertisement