Published
1 hour agoon
By
Akkare News
ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಮೂಡಬಿದ್ರಿ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಹಾಗೂ ಈ ದೀಪಾವಳಿ ವಿಶೇಷ ಆಫರ್ ಎಲ್ಲ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.