Published
4 hours agoon
By
Akkare News
ನವೆಂಬರ್ 14ರವರೆಗೆ ರಾಜ್ಯಾದ್ಯಂತ ಒಣ ಹವಾಮಾನ ಮುಂದುವರಿಯಲಿದ್ದು, ನವೆಂಬರ್ 15ರಿಂದ ಹವಾಮಾನದಲ್ಲಿ ಬದಲಾವಣೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕೇರಳ ಕರಾವಳಿಯಲ್ಲಿದ್ದ ಚಂಡಮಾರುತದ ಪರಿಚಲನೆ ಇದೀಗ ಆಗ್ನೇಯ ಅರೇಬಿಯನ್ ಸಮುದ್ರ ಹಾಗೂ ಲಕ್ಷದ್ವೀಪ ಪ್ರದೇಶದಲ್ಲಿ ನೆಲೆಗೊಂಡಿದೆ. ಮತ್ತೊಂದು ಚಂಡಮಾರುತದ ಪರಿಚಲನೆ ಮನ್ನಾರ್ ಕೊಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಡುಬಂದಿದೆ.
ಇದರ ಪರಿಣಾಮವಾಗಿ ನವೆಂಬರ್ 15 ಮತ್ತು 16ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಆದರೆ ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






