ಕರ್ನಾಟಕ ಸರಕಾರದ ಸಂಸದೀಯ ವ್ಯವಹಾರಗಳ ಇಲಾಖೆ , ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ ಮಂಗಳೂರು, ಶಾಲಾ ಶಿಕ್ಷಣ ಇಲಾಖೆ ಇವುಗಳ ಜಂಟಿ ಸಹಯೋಗದೊಂದಿಗೆ ನಡೆದ ಜಿಲ್ಲಾಮಟ್ಟದ ಯುವ ಸಂಸತ್ ಸ್ಪರ್ಧೆ 2026 ಇದರಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕೊಂಬೆಟ್ಟು ಇಲ್ಲಿನ ವಿದ್ಯಾರ್ಥಿನಿ ಜೀವಿತಾ ದ್ವಿತೀಯ ಬಹುಮಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ದಿನಾಂಕ 12.11.2026ರಂದು ಸರಕಾರಿ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಭಾಗವಹಿಸಿದ ಜೀವಿತಾ ತನ್ನ ಅತ್ಯುತ್ತಮ ನಿರ್ವಹಣೆಗಾಗಿ ದ್ವಿತೀಯ ಬಹುಮಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಪುತ್ತೂರು ತಾಲೂಕು ಬನ್ನೂರು , ಅಯೋಧ್ಯಾನಗರ ನಿವಾಸಿ ರಾಧಾಕೃಷ್ಣ ಗೌಡ ಮತ್ತು ಸುಲೋಚನಿ ದಂಪತಿಗಳ ಪುತ್ರಿ ಯಾಗಿರುವ ಜೀವಿತಾ, ಕೊಂಬೆಟ್ಟು ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ.
ಇವರಿಗೆ ಶಾಲಾ ಉಪಪ್ರಾಂಶುಪಾಲರಾದ ನಾಗರಾಜ ಭಟ್ ಹಾಗೂ ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಮರ್ಸಿ ಮಮತಾ ಮೋನಿಸ್ ಮಾರ್ಗದರ್ಶನ ನೀಡಿರುತ್ತಾರೆ.