Connect with us

ಸ್ಥಳೀಯ

ರಾಜ್ಯದ ಗೃಹಲಕ್ಷ್ಮಿಯರಿಗೆ 4,000 ಹಣ ಬಿಡುಗಡೆ ಕುರಿತು ಮಹತ್ವದ ಅಪ್ಡೇಟ್

Published

on

ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ‘ಗೃಹಲಕ್ಷ್ಮಿ’ಯು ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನೆ ಬ್ಯಾಂಕ್ ಖಾತೆಗೆ 2,000 ರೂಪಾಯಿ ಜಮಾ ಮಾಡಲಾಗುತ್ತಿದೆ. ಈಗಾಗಲೇ 34ನೇ ಕಂತಿನ ಹಣವನ್ನು ಹಾಕಲಾಗಿದೆ. ಇದೀಗ 35 ಹಾಗೂ 36ನೇ ಕಂತಿನ ದೊಡ್ಡು ಯಾವಾಗ ಸಿಗಲಿದೆ ಎನ್ನುವ ಮಹತ್ವದ ಅಪ್ಡೇಟ್‌ ಇಲ್ಲಿದೆ ನೋಡಿ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಪ್ರಕ್ರಿಯೆ ನಿರಂತರವಾಗಿ ಸಾಗಿದ್ದು, 2026ರ ಆಗಸ್ಟ್ ತಿಂಗಳ 34ನೇ ಕಂತಿನ ತಲಾ 2,000 ರೂಪಾಯಿ ಹಣವನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಯಾವುದೇ ಮಧ್ಯವರ್ತಿಗಳು ಅಥವಾ ಏಜೆಂಟರ್‌ಗಳ ಹಸ್ತಕ್ಷೇಪವಿಲ್ಲದೆ, ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಪಾರದರ್ಶಕವಾಗಿ ಫಲಾನುಭವಿಗಳ ಖಾತೆಗೆ ಹಣ ತಲುಪಿಸಲಾಗುತ್ತಿದೆ.

35, 36ನೇ ಕಂತಿನ ಹಣ ಜಮೆ ಕುರಿತು ಮಹತ್ವದ ಮಾಹಿತಿ

ಯೋಜನೆ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೆ ರಾಜ್ಯದ ಕೋಟ್ಯಂತರ ಮಹಿಳಾ ಯಜಮಾನಿಯರ ಖಾತೆಗಳಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ವರ್ಗಾಯಿಸಲಾಗಿದೆ. ಇದೀಗ 34ನೇ ಕಂತಿನ ಬೆನ್ನಲ್ಲೇ, ಬಾಕಿ ಉಳಿದಿರುವ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ (35 ಹಾಗೂ 36ನೇ ಕಂತಿನ) ಹಣವನ್ನೂ ಸಹ ಹಂತ-ಹಂತವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ.

ಅರ್ಹ ಮಹಿಳೆಯರಿಗೆ ಒಟ್ಟು ಮೂರು ಕಂತುಗಳ (ತಲಾ 2,000 ರೂಪಾಯಿನಂತೆ ಒಟ್ಟು 6,000 ರೂಪಾಯಿ) ಹಣ ತಲುಪಲಿದ್ದು, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ (NPCI ಮ್ಯಾಪಿಂಗ್) ಆಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಫಲಾನುಭವಿಗಳು ‘ಡಿಬಿಟಿ ಕರ್ನಾಟಕ’ (DBT Karnataka) ಆ್ಯಪ್ ಅಥವಾ ಬ್ಯಾಂಕ್ ಪಾಸ್‌ಬುಕ್ ಮೂಲಕ ಹಣ ಜಮೆಯಾಗಿರುವ ಸ್ಥಿತಿಯನ್ನು ಪರಿಶೀಲಿಸಬಹುದು.
 

ಈ ಯೋಜನೆಯ ಉದ್ದೇಶ ಏನು? ಇದು ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಕುಟುಂಬ ನಿರ್ವಹಣೆಗೆ ನೆರವಾಗುವ ಉದ್ದೇಶದಿಂದ ಜಾರಿಗೆ ತಂದಿರುವ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ ಯೋಜನೆಗೆ 2023ರ ಆಗಸ್ಟ್ 30ರಂದು ಅಧಿಕೃತವಾಗಿ ಚಾಲನೆ ನೀಡಲಾಯತು. ಪ್ರತಿ ಕುಟುಂಬದ ಯಜಮಾನಿ ಮಹಿಳೆಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ, ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ತಲುಪುವುದರಿಂದ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ. ಈ ಹಣವನ್ನು ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣ, ಆರೋಗ್ಯ, ಮನೆಯ ದಿನಸಿ ಖರೀದಿ ಅಥವಾ ಸಣ್ಣಪುಟ್ಟ ಉಳಿತಾಯಕ್ಕಾಗಿ ಬಳಸಿಕೊಳ್ಳುತ್ತಿರುವ ಘಟನೆಗಳು ನಡೆದಿರುವ ಉದಾಹರಣೆಗಳಿವೆ.

ಗೃಹಲಕ್ಷ್ಮಿ ಯೋಜನೆಗೆ ಯಾರೆಲ್ಲಾ ಅರ್ಹರು?

* ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. * ರಾಜ್ಯ ಸರ್ಕಾರ ವಿತರಿಸಿರುವ ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಯಲ್ಲಿ ‘ಕುಟುಂಬದ ಯಜಮಾನಿ’ ಎಂದು ನಮೂದಾಗಿರುವ ಮಹಿಳೆಯರು ಮಾತ್ರ ಅರ್ಹರಾಗಿರುತ್ತಾರೆ. ಒಂದು ಕುಟುಂಬದಲ್ಲಿ ಒಬ್ಬ ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.

* ಫಲಾನುಭವಿ ಮಹಿಳೆ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು ಮತ್ತು ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಾಗಿರಬಾರದು.

* ಸರ್ಕಾರಿ ನೌಕರರಿಗೂ ಈ ಯೋಜನೆ ಅನ್ವಯಿಸುವುದಿಲ್ಲ.

ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲೆಗಳ ವಿವರ ಅರ್ಹ ಮಹಿಳೆಯರು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಪಡಿತರ ಚೀಟಿ ಸಂಖ್ಯೆ, ಯಜಮಾನಿಯ ಆಧಾರ್ ಕಾರ್ಡ್, ಪತಿಯ ಆಧಾರ್ ಕಾರ್ಡ್ ಹಾಗೂ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರಗಳು ಕಡ್ಡಾಯವಾಗಿವೆ. ಒಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯು ಕೇವಲ ಆರ್ಥಿಕ ಸಹಾಯಧನವಾಗಿ ಅಷ್ಟೇ ಉಳಿಯದೆ, ಲಕ್ಷಾಂತರ ಕುಟುಂಬಗಳ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಮತ್ತು ಮಹಿಳಾ ಸಬಲೀಕರಣಕ್ಕೆ ಹೊಸ ಭಾಷ್ಯ ಬರೆಯುವಲ್ಲಿ ಯಶಸ್ವಿಯಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement