Published
18 hours agoon
By
Akkare News
35, 36ನೇ ಕಂತಿನ ಹಣ ಜಮೆ ಕುರಿತು ಮಹತ್ವದ ಮಾಹಿತಿ
ಯೋಜನೆ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೆ ರಾಜ್ಯದ ಕೋಟ್ಯಂತರ ಮಹಿಳಾ ಯಜಮಾನಿಯರ ಖಾತೆಗಳಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ವರ್ಗಾಯಿಸಲಾಗಿದೆ. ಇದೀಗ 34ನೇ ಕಂತಿನ ಬೆನ್ನಲ್ಲೇ, ಬಾಕಿ ಉಳಿದಿರುವ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ (35 ಹಾಗೂ 36ನೇ ಕಂತಿನ) ಹಣವನ್ನೂ ಸಹ ಹಂತ-ಹಂತವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ.
ಈ ಯೋಜನೆಯ ಉದ್ದೇಶ ಏನು? ಇದು ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಕುಟುಂಬ ನಿರ್ವಹಣೆಗೆ ನೆರವಾಗುವ ಉದ್ದೇಶದಿಂದ ಜಾರಿಗೆ ತಂದಿರುವ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ ಯೋಜನೆಗೆ 2023ರ ಆಗಸ್ಟ್ 30ರಂದು ಅಧಿಕೃತವಾಗಿ ಚಾಲನೆ ನೀಡಲಾಯತು. ಪ್ರತಿ ಕುಟುಂಬದ ಯಜಮಾನಿ ಮಹಿಳೆಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ, ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ತಲುಪುವುದರಿಂದ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ. ಈ ಹಣವನ್ನು ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣ, ಆರೋಗ್ಯ, ಮನೆಯ ದಿನಸಿ ಖರೀದಿ ಅಥವಾ ಸಣ್ಣಪುಟ್ಟ ಉಳಿತಾಯಕ್ಕಾಗಿ ಬಳಸಿಕೊಳ್ಳುತ್ತಿರುವ ಘಟನೆಗಳು ನಡೆದಿರುವ ಉದಾಹರಣೆಗಳಿವೆ.
ಗೃಹಲಕ್ಷ್ಮಿ ಯೋಜನೆಗೆ ಯಾರೆಲ್ಲಾ ಅರ್ಹರು?
* ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. * ರಾಜ್ಯ ಸರ್ಕಾರ ವಿತರಿಸಿರುವ ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಯಲ್ಲಿ ‘ಕುಟುಂಬದ ಯಜಮಾನಿ’ ಎಂದು ನಮೂದಾಗಿರುವ ಮಹಿಳೆಯರು ಮಾತ್ರ ಅರ್ಹರಾಗಿರುತ್ತಾರೆ. ಒಂದು ಕುಟುಂಬದಲ್ಲಿ ಒಬ್ಬ ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.
* ಫಲಾನುಭವಿ ಮಹಿಳೆ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು ಮತ್ತು ಜಿಎಸ್ಟಿ ರಿಟರ್ನ್ಸ್ ಸಲ್ಲಿಸುವವರಾಗಿರಬಾರದು.
* ಸರ್ಕಾರಿ ನೌಕರರಿಗೂ ಈ ಯೋಜನೆ ಅನ್ವಯಿಸುವುದಿಲ್ಲ.