Published
15 hours agoon
By
Akkare News
ಈಶ್ವರಮಂಗಲದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ತಮಿಳುನಾಡು ನೋಂದಣಿಯ ಅಶೋಕ್ ಲೇಲ್ಯಾಂಡ್ ಟೆಂಪೋದಲ್ಲಿ ಮೂರು ಹಸುಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಈ ಕುರಿತು ವಿಚಾರಿಸಿದಾಗ ಗೋವುಗಳ ಸಾಗಾಟಕ್ಕೆ ಯಾವುದೇ ಪರವಾನಿಗೆ ಇಲ್ಲದಿರುವುದು ಕಂಡು ಬಂದಿದೆ.
ಪೊಲೀಸರು ಕಾರ್ಯಾಚರಣೆ ನಡೆಸಿ ವಾಹನ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ಮೂರು ಹಸುಗಳ ರಕ್ಷಣೆ ಮಾಡಿದ್ದಾರೆ.





