Published
14 hours agoon
By
Akkare News
ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮತಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು
ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.





