ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ. 8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಹಿನ್ನೆಲೆಯಲ್ಲಿ ಪುತ್ತೂರು ಶಾಸಕ ಹಾಗೂ ಪುತ್ತೂರು ದೀಪೋತ್ಸವ ಸಮಿತಿಯ ಗೌರವಾಧ್ಯಕ್ಷ ಅಶೋಕ್ ಕುಮಾರ್ ರೈ ಅವರಿಗೆ ಆಮಂತ್ರಣ ಪತ್ರಿಕೆ ನೀಡಲಾಯಿತು. ಆಮಂತ್ರಣ ಪತ್ರಿಕೆ ಸ್ವೀಕರಿಸಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ದೀಪೋತ್ಸವ ಯಶಸ್ಸಾಗಿ ನಡೆಯಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಶುಭಹಾರೈಸಿದರು. ಈ ಕಾರ್ಯಕ್ರದಲ್ಲಿ ನಾನೂ ಜೊತೆಯಾಗುತ್ತೇನೆ. ಒಟ್ಟಾಗಿ ಆಚರಿಸೋಣವೆಂದು ಹೇಳಿದರು. ಈ ಸಂದರ್ಭದಲ್ಲಿ ದೀಪೊತ್ಸವದ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಸಂಚಾಲಕ ಸಂತೋಷ್ ಕುಮಾರ್ ಗಾಡಿಗುಡ್ಡೆ, ಕೋಶಾಧಿಕಾರಿ ದಾಮೋದರ ಪಾಟಾಳಿ, ಸ್ವಾಗತ ಸಮಿತಿಯ ಪದ್ಮನಾಭ ಶೆಟ್ಟಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.