Published
16 hours agoon
By
Akkare News
ಸುಮಾರು ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಿಸುವ ಬೃಹತ್ ಸಂಕಲ್ಪದೊಂದಿಗೆ ಆಯೋಜಿಸಲಾಗಿರುವ ಕಾರ್ಯಕ್ರಮಕ್ಕೆ ಸುಮಾರು ₹4 ಕೋಟಿ ವೆಚ್ಚ ಮಾಡಲಾಗುತ್ತಿದೆ. ಉಡುಗೊರೆ ವಿತರಣೆ ಮಾತ್ರವಲ್ಲದೆ, ಬೃಹತ್ ಅನ್ನದಾನ, ದೋಸೆ ಮೇಳ ಸೇರಿದಂತೆ ಹಲವು ವಿಶೇಷ ವ್ಯವಸ್ಥೆಗಳು ಈ ಬಾರಿಯ ಜನಮನದ ಆಕರ್ಷಣೆಯಾಗಲಿವೆ. ಪುತ್ತೂರು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದಲೂ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿದ್ದು, ಕೊಂಬೆಟ್ಟು ಕ್ರೀಡಾಂಗಣ ಜನಸಾಗರಕ್ಕೆ ಸಾಕ್ಷಿಯಾಗಲಿದೆ.
14 ವರ್ಷಗಳ ಜನಸೇವೆಯ ಪಯಣ: ಜನಮನದಲ್ಲಿ ವಿಶೇಷ ಸ್ಥಾನ! ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಮಾಜದ ಬಡವರು, ಮಧ್ಯಮ ವರ್ಗದವರು ಸೇರಿದಂತೆ ಎಲ್ಲ ವರ್ಗದ ಜನರೊಂದಿಗೆ ಹಬ್ಬದ ಸಂತೋಷ ಹಂಚಿಕೊಳ್ಳುವ ಆಶಯದೊಂದಿಗೆ ಆರಂಭಗೊಂಡ ‘ಅಶೋಕ ಜನಮನ’ ಇಂದು ಪುತ್ತೂರಿನ ಪ್ರಮುಖ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.
ಕಳೆದ 14 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಕ್ರಮ ವರ್ಷದಿಂದ ವರ್ಷಕ್ಕೆ ತನ್ನ ವ್ಯಾಪ್ತಿ ಹಾಗೂ ಜನಪ್ರಿಯತೆಯನ್ನು ವಿಸ್ತರಿಸಿಕೊಂಡಿದೆ. ರಾಜಕೀಯ, ಜಾತಿ, ಧರ್ಮದ ಭೇದವಿಲ್ಲದೆ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಗೊರೆ ಪಡೆದುಕೊಳ್ಳುವ ಮುಕ್ತ ಅವಕಾಶ ಇದರ ವಿಶೇಷತೆಯಾಗಿದೆ





