Connect with us

ಸ್ಥಳೀಯ

ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ; ಪಬ್‌ನಲ್ಲಿ ಪರಿಚಯವಾದ ಆರೋಪಿ ಬಂಧನ!

Published

on

ಬೆಂಗಳೂರು: ಪಬ್‌ನಲ್ಲಿ ಪರಿಚಯವಾದ ಯುವಕನೊಬ್ಬ ಹೋಟೆಲ್‌ಗೆ ಆಹ್ವಾನಿಸಿ ಮದ್ಯಪಾನ ಮಾಡಿಸಿದ ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ರಾಜಸ್ಥಾನ ಮೂಲದ ಯುವತಿಯೊಬ್ಬರು ಆರೋಪಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ಪಬ್‌ನಲ್ಲಿ ಯುವತಿಗೆ ಸಮೀರ್ ಎಂಬಾತನ ಪರಿಚಯವಾಗಿತ್ತು. ಸಿಗರೇಟ್ ಸೇದಲು ಲೈಟರ್ ಕೇಳಿದ ಸಂದರ್ಭದಲ್ಲಿ ಇಬ್ಬರ ನಡುವೆ ಮಾತುಕತೆ ಆರಂಭವಾಗಿದ್ದು, ಬಳಿಕ ಸಮೀರ್ ಯುವತಿಯ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡಿದ್ದ ಎನ್ನಲಾಗಿದೆ. ನಂತರ ಇಬ್ಬರ ನಡುವೆ ಸಂಪರ್ಕ ಮುಂದುವರಿದಿದ್ದು, ಸಮೀರ್ ಯುವತಿಯನ್ನು ಮಡಿವಾಳದ ಹೋಟೆಲ್‌ಗೆ ಆಹ್ವಾನಿಸಿದ್ದಾನೆ. ಹೋಟೆಲ್‌ಗೆ ತೆರಳಿದ ಬಳಿಕ ಇಬ್ಬರೂ ಮದ್ಯ ಸೇವಿಸಿದ್ದು, ಈ ವೇಳೆ ಯುವತಿಗೆ ಹೆಚ್ಚು ಮದ್ಯಪಾನ ಮಾಡಿಸಿ, ಆಕೆ ನಶೆಯಲ್ಲಿದ್ದಾಗ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಳಿಕ ಬೆಳಗಿನ ಜಾವ ಹೋಟೆಲ್‌ನಿಂದ ಹೊರಬಂದ ಯುವತಿ ನೇರವಾಗಿ ಮಡಿವಾಳ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ತನಿಖೆ ಕೈಗೊಂಡು ಆರೋಪಿ ಸಮೀರ್‌ನನ್ನು ಬಂಧಿಸಿದ್ದಾರೆ. ಬಳಿಕ ನ್ಯಾಯಾಂಗ ಪ್ರಕ್ರಿಯೆ ಪೂರ್ಣಗೊಂಡ ನಂತರ ಆರೋಪಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version