Published
39 minutes agoon
By
Akkare News
ಈ ಸಂದರ್ಭದಲ್ಲಿ ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನುವಿಸ್ತರಿಸುತ್ತಿದೆ.
ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ.
ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.





