Published
7 months agoon
By
Akkare Newsವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕ
ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ ಅದೇಶ ಮಾಡಿದೆ.
ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯದ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.