ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ
ಚಿಕ್ಕಮುಡ್ನೂರು ಬಿಲ್ಲವ ಗ್ರಾಮ ಸಮಿತಿ ಹಾಗೂ ಮಹಿಳಾ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ ಮತ್ತು ಉಚಿತ ಪುಸ್ತಕ ವಿತರಣೆ ಜೂ. 2ರಂದು ಚಿಕ್ಕಮುಡ್ನೂರು ಬಿರ್ನಹಿತ್ಲು ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಚಿಕ್ಕಮುಡ್ನೂರು ಗ್ರಾಮ ಸಮಿತಿಯ ಅಧ್ಯಕ್ಷ ಭಾಸ್ಕರ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಬಿಲ್ಲವ ಸಂಘದ ಕಾರ್ಯದರ್ಶಿ ಚಿದಾನಂದ ಸುವರ್ಣ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಚಿಕ್ಕಮುಡ್ನೂರು ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಶ್ಮಿತಾ ಕುಮಾರಿ ಎ. ವಾರ್ಷಿಕ ವರದಿ ವಾಚಿಸಿ ಸಭೆಯ ಅನುಮೋದನೆ ಪಡೆದರು. ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯ ನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ, ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ.ಟಿ. ಮಹೇಶ್ಚಂದ್ರ ಸಾಲಿಯಾನ್, ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ ಬಿ.ಎನ್. ಮತ್ತು ವಲಯ ಸಂಚಾಲಕ ಬಿ. ಅಣ್ಣಿ ಪೂಜಾರಿ ಶುಭ ಹಾರೈಸಿದರು.
ನಂತರ ಪುಸ್ತಕ ವಿತರಣೆ ನಡೆಯಿತು. ಬಳಿಕ ನಿಕಟಪೂರ್ವ ಅಧ್ಯಕ್ಷ ಅಣ್ಣಿ ಪೂಜಾರಿಯವರಿಗೆ ಸನ್ಮಾನ ನೆರವೇರಿತು. ವೇದಿಕೆಯಲ್ಲಿ ಮಹಿಳಾ ಗ್ರಾಮ ಸಮಿತಿಯ ಅಧ್ಯಕ್ಷೆ ಗೀತಾ ಗಂಗಾಧರ, ಶಾಲಾಭಿವೃದಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರಾದ ಗ್ರಾಮ ಸಮಿತಿಯ ಉಪಾಧ್ಯಕ್ಷ ಜನಾರ್ದನ ಪೂಜಾರಿ ತಾರಕೆರೆ ವೇದಿಕೆಯಲ್ಲಿ ಉಪಸ್ಥಿತದರು. ಸುಷ್ಮಾ ಆನಂತಿಮಾರು ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಸಮಿತಿಯ ನಿಕಟಪೂರ್ವ ಕಾರ್ಯದರ್ಶ ನಿಶ್ಚಿತಾ ಕುಮಾರಿ ಅಡ್ಲಿಮಜಲ್ ಮತ್ತಿತರರು ಭಾಗವಹಿಸಿದ್ದರು.