Published
7 months agoon
By
Akkare Newsಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಜೂನ್ 13 ರಂದು ನಡೆಯುವ ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ 8 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು
ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನು ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಅಲ್ಲದೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ.