Published
11 months agoon
By
Akkare Newsಆದರೆ, ರಾಹುಲ್ ಗಾಂಧಿ ಜೂನ್ 1ರಂದು ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದರು. ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಜೂನ್ 7ರೊಳಗೆ ಹಾಜರಾಗಬೇಕೆಂದು ಆದೇಶಿಸಿತ್ತು.
ಈ ಹಿನ್ನೆಲೆ, ಇಂದು ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಬರಮಾಡಿಕೊಂಡಿದ್ದಾರೆ.
ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿಯಾದರೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಕ್ರಮವಾಗಿ 2,3 ಮತ್ತು 4ನೇ ಆರೋಪಿಗಳಾಗಿದ್ದಾರೆ.