ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಕಾಂಗ್ರೆಸ್ ಗ್ಯಾರಂಟಿ ಜನರಿಗೆ ಇಷ್ಟ ಆಗಿಲ್ಲ ಆಂದರೆ… ಸಾಮೂಹಿಕವಾಗಿ ಕೊಡುವುದನ್ನು ನಿಲ್ಲಿಸೋದೆ ಒಳಿತು : ಎಂ ಲಕ್ಷ್ಮಣ್

Published

on

ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿತ್ತು. ಜನ ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಲೇ ಅಲ್ವಾ? ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗ ಮರು ಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ ಗಮನಹರಿಸಬೇಕು. 70% ರಷ್ಟು ಮೇಲ್ವರ್ಗದವರು ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಆದರೆ ಅದನ್ನು ಜನರು ತಿರಸ್ಕಾರ ಮಾಡಿದ್ದಾರೆ ಎಂದರು.

 

 

Continue Reading
Click to comment

Leave a Reply

Your email address will not be published. Required fields are marked *

Advertisement