ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುವೈಝು ನವದೆಹಲಿಗೆ ಆಗಮಿಸಿದ್ದಾರೆ.
ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಟ್ವೀಟ್ ಮಾಡಿದ್ದಾರೆ.