Published
7 months agoon
By
Akkare Newsಪೆರ್ಲ ಜೂನ್ 11,. ಮಧ್ಯ ವ್ಯಸನ ಬಿಟ್ಟು ಹೊಸ ಜೀವನ ಕಟ್ಟಿಕೊಳ್ಳಿ, ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಎಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಇಡಿಯಡ್ಕದ ಮುಖ್ಯ ಅರ್ಚಕರಾದ ಕೃಷ್ಣರಾಜ್ ಪುಣಿ೦ಚಿತ್ತಾಯ ಶುಭ ಹಾರೈಸಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಮಂಜೇಶ್ವರ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಮಂಜೇಶ್ವರ ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯ ವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಮಂಜೇಶ್ವರ,ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪೆರ್ಲ, ನವಜೀವನ ಸಮಿತಿಗಳು ಮಂಜೇಶ್ವರ ತಾಲೂಕು, ಸ್ಥಳೀಯ ಸಂಘ ಸಂಸ್ಥೆ ಹಾಗೂ ದಾನಿಗಳ ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಲಾಯಿಲಾ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರಗುವ 1801 ನೇ ಮದ್ಯವರ್ಜನ ಶಿಬಿರ ವನ್ನು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ) ದೇವಸ್ಥಾನ ಇಡಿಯಡ್ಕ ಪೆರ್ಲ ಇಲ್ಲಿ ಉದ್ಘಾಟಿಸಿ ಮಾತನಾಡಿದರು.
ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಭಾರೀ ಗದ್ದಲ ಎಬ್ಬಿಸಿದ ಕಾಡಾನೆಯನ್ನು ಅರಣ್ಯ ಇಲಾಖೆಯವರು ಅಲ್ಲಿಂದ ಬೆನ್ನಟ್ಟುವಲ್ಲಿ ಯಶಸ್ವಿಯಾಗಿದ್ದರು. ಅದಾದ ಬಳಿಕ ಕೆಲವು ತಿಂಗಳು ಕಳೆದ ನಂತರ ಆನೆ ಸವಣೂರು ಗ್ರಾಮದ ಕುಮಾರಮಂಗಲ, ಪುಣ್ಚಪ್ಪಾಡಿ ಪ್ರದೇಶದಲ್ಲಿ ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿತ್ತು.
ಜೂ. 5 ರಂದು ಸವಣೂರು ಗ್ರಾಮದಿಂದ ಆನೆ ಕೆಯ್ಯೂರು ಗ್ರಾಮದ ತೆಗ್ಗು, ಓಲೆಮುಂಡೋವು ಪರಿಸರಕ್ಕೆ ತೆರಳಿತ್ತು. ಅಲ್ಲಿಯೂ ಒಂದಷ್ಟು ಕೃಷಿ ಹಾನಿಯುಂಟು ಮಾಡಿತ್ತು. ತೆಗ್ಗು ಎರಬೈಲು ಗುಡ್ಡದಲ್ಲಿದ್ದ ಆನೆಯನ್ನು ಅರಣ್ಯ ಇಲಾಖೆಯವರು ಮತ್ತೆ ಹಿಂದಿರುಗುವಂತೆ ಮಾಡಿದ್ದರು. ಆ ಬಳಿಕ ನರಿಮೊಗರು ಗ್ರಾಮದ ವೀರಮಂಗಲಕ್ಕೆ ಕಾಲಿಟ್ಟಿತ್ತು. ಜೂ.10 ಕ್ಕೆ ಶಾಂತಿಗೋಡು ಗ್ರಾಮಕ್ಕೆ ತಲುಪಿತ್ತು. ಶಾಂತಿಗೋಡಿನ ಗೇರು ಅಭಿವೃದ್ಧಿ ಮತ್ತು ಸಂಶೋಧನಾ ಕೇಂದ್ರದ ಗೇರು ತೋಪಿನೊಳಗೂ ನುಗ್ಗಿತ್ತು. ಅಲ್ಲಿಂದ ಜೂ.11 ರ ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರದ ಬಾರ್ತೋಲಿ ಎಂಬಲ್ಲಿ ತೋಟದಲ್ಲಿ ಕಂಡು ಬಂದಿದೆ ಎಂದು ಹೇಳಲಾಗಿದೆ.