Published
6 months agoon
By
Akkare News2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(ಎಚ್ಎಸ್ಆರ್ಪಿ) ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದೆ.
ಹೆಚ್ಎಸ್ಆರ್ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ.
ಈ ಮೊದಲು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12ರವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಈಗ ದಿನಾಂಕ ಮುಕ್ತಾಯವಾದ ಹಿನ್ನಲೆಯಲ್ಲಿ ಈ ಆದೇಶವನ್ನು ಜುಲೈ 4ರವರೆಗೆ ವಿಸ್ತರಿಸಲಾಗಿದೆ.
ವಿಚಾರಣೆಯನ್ನು ಕೈಗೆತ್ತಿಕೊಂಡ ವಿಭಾಗೀಯ ಪೀಠ ಗಡುವು ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರೊಂದಿಗೆ ವಾಹನ ಸವಾರರಿಗೆ ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಅವಕಾಶ ಸಿಕ್ಕಂತಾಗಿದೆ.ಹಳೆ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ ಮಾಡಿರುವ ಬಗ್ಗೆ ಎಚ್ಎಸ್ಆರ್ಪಿ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಮೇಲ್ಮನವಿ ಸಲ್ಲಿಸಿದ್ದವು. ಎಚ್ಎಸ್ಆರ್ಪಿ ತಯಾರಿಸುವ ಬಿಎನ್ಡಿ ಎನರ್ಜಿ ಲಿಮಿಟೆಡ್ ಕಂಪನಿ ಅವಧಿ ವಿಸ್ತರಣೆ ಮಾಡಲು ಮನವಿ ಸಲ್ಲಿಸಿತ್ತು.
ಈಗಲೇ ಅರ್ಜಿ ಸಲ್ಲಿಸಿ?
ಜಾಲತಾಣಕ್ಕೆ ಭೇಟಿ ನೀಡಿ ಎಚ್ಎಸ್ಆರ್ಪಿ ಪಡೆಯಲು ಅರ್ಜಿ ಸಲ್ಲಿಸಬಹುದು. ಮೊದಲು Book HSRP ಕ್ಲಿಕ್ ಮಾಡಿ.
ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
ನಂಬರ್ ಪ್ಲೇಟ್ ಬದಲಾಯಿಸಲು ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
ಶುಲ್ಕವನ್ನು ಆನ್ಲೈನ್ನಲ್ಲಿ ಪಾವತಿಸಿ. (ನಗದು ರೂಪದಲ್ಲಿ ಪಾವತಿ ಮಾಡಲು ಅವಕಾಶ ಇಲ್ಲ).
ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ.
ಎಚ್ಎಸ್ಆರ್ ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ ಎಚ್ಎಸ್ಆರ್ ಪಿ ಪಡೆಯಬಹುದು.