Published
6 months agoon
By
Akkare Newsಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆಯು ವಿಟ್ಲಾ ಯೋಜನಾ ಕಚೇರಿಯ ಸಭಾಂಗಣದಲ್ಲಿ ಜರಗಿತು. ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ ಪಟಗಾರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ವಿಪತ್ತು ನಿರ್ವಹಣಾ ಘಟಕಗಳ ಮುಂದಿನ ಕಾರ್ಯಕ್ರಮಗಳ, ನಡವಳಿಗಳ ಬಗ್ಗೆ ಮಾಹಿತಿ ನೀಡಿದರು.
ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಕಾರ್ಯಕ್ರಮದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಶೌರ್ಯ ಘಟಕಗಳ ಬಲವರ್ಧನೆಗೆ ಪೂರಕವಾದ ಮಾಹಿತಿ ನೀಡಿದರು,
ಈ ಸಂದರ್ಭ ಮಾಸ್ಟರ್ ಮತ್ತು ಕ್ಯಾಪ್ಟನ್ ಗಳ ಆಯ್ಕೆ ಮಾಡಲಾಯಿತು ಶೌರ್ಯ ವಿಪತ್ತು ನಿರ್ವಹಣಾ ಘಟಕಗಳಿಗೆ ಸೇರ್ಪಡೆಗೊಂಡ ನೂತನ ಸದಸ್ಯರಿಗೆ ಸಮವಸ್ತ್ರ ನೀಡಲಾಯಿತು. ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಕಿಶೋರ್ ಕುಮಾರ್, ಜನಜಾಗ್ರತಿ ಮೇಲ್ವಿಚಾರಕ ನಿತೇಶ್ ಕೆ, ಹಾಗೂ ತಾಲೂಕಿನ ಎಲ್ಲಾ ವಲಯಗಳ ಮೇಲ್ವಿಚಾರಕರು, ಘಟಕ ಸಂಯೋಜಕರು, ಘಟಕ ಪ್ರತಿನಿಧಿಗಳು ಉಪಸ್ಥಿತರಿದ್ದರು. ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಪ್ರಾಸ್ತಾವಿಕ ಮಾತುಗಳನ್ನಡಿ,ಕಲ್ಲಡ್ಕ ವಲಯದ ಮೇಲ್ವಿಚಾರಕಿ ಸುಗುಣ ಶೆಟ್ಟಿ ಸ್ವಾಗತಿಸಿ, ಕೇಪು ವಲಯದ ಮೇಲ್ವಿಚಾರಕ ಜಗದೀಶ್ ವಂದಿಸಿ, ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದ್ ಕಾರ್ಯಕ್ರಮ ನಿರೂಪಿಸಿದರು.