Published
6 months agoon
By
Akkare Newsಪ್ರತಿಷ್ಠಿತ ಪುತ್ತೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ್ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿ ಖ್ಯಾತ ನ್ಯಾಯವಾದಿ ಅರಂತನಡ್ಕ ಬಾಲಕೃಷ್ಣ ರೈ ಇವರಿಂದ ಅಧಿಕೃತ ಘೋಷಣೆಯೊಂದೇ ಬಾಕಿ.
ಚುನಾವಣಾ ಪ್ರಕ್ರಿಯೆ ನಡೆಯುತ್ತುದ್ದು ನಾಮಪತ್ರ ಸಲ್ಲಿಕೆಗೆ ಇಂದು ಕಡೆಯದಿನ ಅಧ್ಯಕ್ಷ ಸ್ಥಾನಕ್ಕೆ ಇವರೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದಾಗಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಬನ್ನೂರು ಗುತ್ತು ಮನೆಯಲ್ಲಿ ಡಿಸೆಂಬರ್ 21 1964 ರಲ್ಲಿ ಕಾವು ಅಂತಪ್ಪ ಶೆಟ್ಟಿ ಮತ್ತು ಬನ್ನೂರು ಗುತ್ತು ತಾರಾ ಅಂತಪ್ಪ ಶೆಟ್ಟಿ ದಂಪತಿಗಳ ತೃತೀಯ ಪುತ್ರನಾಗಿ ಜನಿಸಿದರು.
ತನ್ನ ಪ್ರಾಥಮಿಕ ಶಿಕ್ಷಣವನ್ನು ಮಡಿಕೇರಿ ಸೈಂಟ್ ಮೈಕೆಲ್ ಶಾಲೆಯಲ್ಲಿ ಪ್ರಾರಂಭಿಸಿ ನಂತರ ಮಾಡ್ನೂರು ಕಾವು ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪೆರ್ನಾಜೆ ಸೀತಾರಾಘವ ಪ್ರೌಢಶಾಲೆ ಮತ್ತು , ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಪಡೆದು, ಸುಳ್ಯ ಕೆ ವಿ ಜಿ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ಶಿಕ್ಷಣವನ್ನು ಅಭ್ಯಸಿಸಿದರು. ಪುತ್ತೂರು ಸಂತಫಿಲೋಮಿನಾ ಕಾಲೇಜಿನಲ್ಲಿ ಬಿ ಎ ಪದವಿ ಶಿಕ್ಷಣವನ್ನು ಪಡೆದರು.