Published
6 months agoon
By
Akkare Newsಪುತ್ತೂರು:ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳೂ ಆಗಿರುವ ಖ್ಯಾತ ನ್ಯಾಯವಾದಿಗಳಾದ ಭಾಸ್ಕರ ಕೋಡಿಂಬಾಳ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಳ್ಳಲಾದ ಶಾಸನ ಅಧ್ಯಯನ ಸಂರಕ್ಷಣಾ ಯೋಜನೆ ಹಾಗೂ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಹಾಗೂ ಇತರ ಸಾಹಿತ್ಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.ಈ ಸಂದರ್ಭದಲ್ಲಿ ಅವರಿಗೆ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ, ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ನಿಯೋಜಿತ ಅಧ್ಯಕ್ಷರಾದ ಸುರೇಶ್ ಅವರು ತಮ್ಮ ಪದ ಸ್ವೀಕಾರ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಿಗೆ ನೀಡಿ ಕನ್ನಡ ಹಾಗೂ ಸಾಹಿತ್ಯ ಪರಿಷತ್ತಿನ ಚಟುವಟಿಕೆಗೆ ಸಹಕಾರ ನೀಡುವುದಾಗಿ ತಿಳಿಸಿದರು. ರೋಟರಿ ಸ್ವರ್ಣ ಇದರ ಪೂರ್ವಾಧ್ಯಕ್ಷ ವೆಂಕಟರಮಣ ಕಳುವಾಜೆ ಅವರು ಉಪಸ್ಥಿತರಿದ್ದರು.