Published
6 months agoon
By
Akkare Newsಬೆಂಗಳೂರು : ಕೇಂದ್ರ ಕ್ಯಾಬಿನೆಟ್ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸಹಿ ಹಾಕಿದ್ದ ಮೊದಲ ಕಡತಕ್ಕೇ ಈಗ ಬಹುದೊಡ್ಡ ವಿಘ್ನ ಉಂಟಾಗಿದ್ದು, ದೇವದಾರಿ ಮೈನಿಂಗ್ ಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಎಚ್ ಡಿ ಕುಮಾರಸ್ವಾಮಿ ಅವರಿಗೆ ಮುಖಭಂಗ ಮಾಡುವ ರೀತಿಯಲ್ಲಿ ರಾಜ್ಯ ಸರ್ಕಾರದ ಈ ಆದೇಶ ಹೊರ ಬಿದ್ದಿದೆ.
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲಿಗೆ ಸಹಿ ಹಾಕಿದ್ದ ರಾಜ್ಯಕ್ಕೆ ಸಂಬಂಧಿಸಿದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯ ಗಣಿಗಾರಿಕೆಗೆ ಸಂಬಂಧಿಸಿದ ಯೋಜನೆಗೆ ರಾಜ್ಯ ಸರ್ಕಾರ ತಡೆ ನೀಡಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಹಿಲ್ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಗೆ ಗಣಿಗಾರಿಕೆ ನಡೆಸಲು ಅವಕಾಶ ಕಲ್ಪಿಸುವ ಸಂಬಂಧದ ಅರಣ್ಯ ತೀರುವಳಿ ಗುತ್ತಿಗೆ ಪತ್ರ ತಡೆಹಿಡಿಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.