ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

*ಗುಡ್ ನ್ಯೂಸ್ : ಇಂದು, ನಾಳೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ*

Published

on

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು, ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು.
ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ, ಇಡೀ ರಾಜ್ಯದಲ್ಲಿ ಇಂದು ಮತ್ತು ನಾಳೆ ಖಾತೆಗೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋಲ್ಲ, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ಘೋಷಿಸಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ತಂದಿದೆ. ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ರಾಜ್ಯದ 1 ಕೋಟಿಗಿಂತ ಹೆಚ್ಚು ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.

ಪ್ರ

 

 

 

Continue Reading
Click to comment

Leave a Reply

Your email address will not be published. Required fields are marked *

Advertisement