ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ, ಮಾತನಾಡಿದ ಮುಖ್ಯಮಂತ್ರಿಗಳು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ 8.00 ಗಂಟೆಗೆ ಭೇಟಿಗೆ ಸಮಯ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ ದೆಹಲಿಯಿಂದ ಹೊರಟು ಉದ್ಘಾಟನೆ ತಪ್ಪಿಸಬಾರದೆಂದು ಆಗಮಿಸಿದ್ದೇನೆ.

 

ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ, ಮುಂದೆಯೂ ಮಾಡಲಿದೆ. ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣವನ್ನು ಪಿ.ಪಿ.ಪಿ ಮಾದರಿಯಲ್ಲಿ ಕೈಗೊಳ್ಳಲಿದ್ದು, ನೂರು ಎಕರೆಗೂ ಹೆಚ್ಚು ಜಮೀನು ಒದಗಿಸಲಾಗಿದೆ. ಚಿತ್ರನಗರಿ ಡಾ|| ರಾಜ್ ಕುಮಾರ್ ಅವರ ಕನಸಾಗಿತ್ತು, ಅದನ್ನು ನನಸಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ.

1972 ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆ. ಸಂಘಟ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement