Published
6 months agoon
By
Akkare Newsಮಂಗಳೂರು : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ ಬಿ.ಇ.ಒ/ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ತಾಲೂಕಿನಲ್ಲಿ ಹಲವೆಡೆ ಹಲವಾರು ವಿದ್ಯಾರ್ಥಿಗಳು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಬರುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದು, ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಜಾಗೃತೆ ವಹಿಸಲು ತಿಳಿಸಿದ್ದಾರೆ.