Published
6 months agoon
By
Akkare Newsಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯುವವರೆಗೆ ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಆದೇಶ ನೀಡಿದ್ದಾರೆ. ಇಂದು ನಗರದ ಬಲ್ಮಠ ರೋಡ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು ಓರ್ವ ಕಾಮಿಕ ಮೃತ್ಯು ಹೊಂದಿದ್ದ. ಈ ಕಾರಣಕ್ಕೆ ಈ ಆದೇಶ ಹೊರಡಿಸಲಾಗಿದೆ. ಹಾಗೂ ಈ ಮೂಲಕ ಕಟ್ಟಡ ನಿರ್ಮಾಣ ಸಂಸ್ಥೆಗಳಿಗೆ ಪಾಲಿಕೆ ಆಯುಕ್ತರಿಂದ ಎಚ್ಚರಿಕೆ ನೀಡಿದ್ದಾರೆ.
ಭೂ ಅಗೆತವನ್ನು ಅವೈಜ್ಞಾನಿಕ ರೀತಿಯಲ್ಲಿ ಮಾಡುವುದು, ಇದರಿಂದ ಜೀವ ಹಾನಿ, ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಈ ಕಾರಣದಿಂದ ಮಳೆಗಾಲ ಮುಗಿಯುವವರೆಗೆ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಬಾರದು.
ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಬೇಕು. ಇದನ್ನು ಉಲ್ಲಂಘನೆ ಮಾಡಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.