Published
6 months agoon
By
Akkare Newsನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
ಇದೇ ವೇಳೆ ಲಾಲ್ ಕೃಷ್ಣ ಅಡ್ವಾಣಿ ಅವರ ಕುಟುಂಬ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ ನಿತ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆ ಜೂನ್ 27 ರಂದು ಅಡ್ವಾಣಿ ಅವರ ಆರೋಗ್ಯ ಹದಗೆಟ್ಟ ನಿಟ್ಟಿನಲ್ಲಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಮನೆಗೆ ಬಂದಿದ್ದರು.
ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ.ವಿನೀತ್ ಪುರಿ ಅವರು ಎಲ್‌ಕೆ ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು. ಅರೋಗ್ಯ ಸ್ಥಿರವಾಗಿದೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.