Published
6 months agoon
By
Akkare Newsಬೆಂಗಳೂರು: 01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ಅನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ದಿನಾಂಕ 01-04-2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ 01-04-2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊರುಗಡೆ ಯೋಜನೆ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ.
ಈ ಆದೇಶಕ್ಕನುಗುಣವಾಗಿ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು 30.06.2024 ಕೊನೆಯ ದಿನಾಂಕವಾಗಿರುತ್ತದೆ.
ದಿನಾಂಕ 31-07-2024ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಿ ತಮ್ಮ ಶಿಫಾರಸ್ಸಿನೊಂದಿಗೆ ಇಲಾಖೆ ಮುಖ್ಯಸ್ಥರೊಂದಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ಆದೇಶಿಸಲಾಗಿದೆ. 31-08-2024ರೊಳಗೆ ಅರ್ಹ ನೌಕರರ ಪಟ್ಟಿಯನ್ನು ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು ಆದೇಶದಲ್ಲಿ ತಿಳಿಸಲಾಗಿದೆ.