Published
6 months agoon
By
Akkare News
ಬೆಳ್ತಂಗಡಿ: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದ್ದು, ನಿರ್ದೇಶಕರು, ಸದಸ್ಯರುಗಳ ಆಯ್ಕೆಗೆ ರಾಜ್ಯಮಟ್ಟದಲ್ಲಿ ಸಮಿತಿಯನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ವಿವಿಧ ನಿಗಮ ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಯ ಈ ರಾಜ್ಯ ಸಮಿತಿಯ ಸದಸ್ಯರಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಶಾಸಕರಾದ ಕೆ. ಹರೀಶ್ ಕುಮಾರ್ ಅವರು ನೇಮಕಗೊಂಡಿದ್ದಾರೆ.
ಸಮಿತಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷರಾಗಿದ್ದಾರೆ. ಉಳಿದಂತೆ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೋಳಿ, ಸಂತೋಷ್ ಎಸ್.ಲಾಡ್, ಡಾ.ಶರಣಪ್ರಕಾಶ್ ರುದ್ರಪ್ಪಪಾಟೀಲ್, ರಾಜ್ಯ ಸಭಾ ಸದಸ್ಯ ಜಿ.ಸಿ ಚಂದ್ರಶೇಖರ್, ವಿಧಾನ ಸಭಾ ಸದಸ್ಯರಾದ ಡಾ.ರೂಪಕಲಾ ಎಂ ಹಾಗೂ ವಿ.ಆರ್ ಸುದರ್ಶನ್ ಇದ್ದಾರೆ.